ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಕೋಪಕ್ಕೊಂದು ಮೊಳೆ

picture

ಯುವಕನೊಬ್ಬನಿಗೆ ಬಹಳ ಮುಂಗೋಪದ ಸ್ವಭಾವ. ಇದರಿಂದಾಗಿ ಅವನಿಗೂ ಅವನ ಕುಟುಂಬದವರಿಗೂ ಆಗಿಂದಾಗ್ಗೆ ಕೆಟ್ಟ ಆಪಾದನೆಗಳು ಕೇಳಿ ಬರುತ್ತಿದ್ದವು. ಅದನ್ನರಿತ ಯುವಕ ತನ್ನ ಕೋಪವನ್ನು ತಡೆಯಲಾಗದೆ ಸಂಕಟಕ್ಕೊಳಗಾಗುತ್ತಲೇ ಇದ್ದ.ಒಮ್ಮೆ ಅವನ ತಂದೆ ಮಗನ್ನನ್ನು ಕರೆದು "ಮಗು ನೀನು ನಿಜವಾಗಿಯೂ ನಿನ್ನ ಕೋಪವನ್ನು ಹತೋಟಿಯಲ್ಲಿ ಇಡಬೇಕಿದ್ದಲ್ಲಿ ನಿನಗೆ ಕೋಪಬಂದಾಗಲೆಲ್ಲ ತೋಟದಲ್ಲಿನ ಬೇಲಿಯ ಮರದ ಮೇಲೆ ಒಂದು ಮೊಳೆಯನ್ನು ಹೊಡಿ"ಎಂದ. ಯುವಕ ಮೊದಲ ದಿನವೇ 37 ಮೊಳೆ ಹೊಡೆದ,ನಂತರ 21,13,8,3,2,1 ಹೀಗೇ ಬರುಬರುತ್ತಾ ಕೋಪ ಬರುವುದು ತಾನಾಗೇ ಕಡಿಮೆಯಾಯಿತು. ಅಪ್ಪನಿಗೆ ವಿಷಯ ತಿಳಿಸಿದ.ತಂದೆ "ಬಹಳ ಸಂತೋಷ ಮಗೂ ಇನ್ನು ಮುಂದೆ ನೀನು ಕೋಪಬರುವುದನ್ನು ತಡೆಯಬೇಕು,ಹಾಗೆ ಮಾಡಿದಾಗಲೆಲ್ಲಾ ಅಲ್ಲಿಂದ ಒಂದೊಂದು ಮೊಳೆಯನ್ನು ತೆಗೆಯುತ್ತಾ ಬಾ" ಅಂದ.

ಹಾಗೇ ದಿನಗಳು,ವಾರಗಳು ತಿಂಗಳುಗಳೇ ಕಳೆದವು.ತನ್ನ ಕೋಪವನ್ನು ತಡೆಯಲು ಶಕ್ತನಾದಾಗಲೆಲ್ಲಾ ಒಂದೊಂದಾಗಿ ಮೊಳೆಗಳನ್ನು ತೆಗೆದ"ಎಲ್ಲಾ ಕಳಚಿದ ನಂತರ ಸಂತಸದಿಂದ ಮತ್ತೆ ತನ್ನ ತಂದೆಗೆ ತಿಳಿಸಿದ. ತಂದೆ "ನನಗೆ ಬಹಳ ಖುಷಿಯಾಗುತ್ತಿದೆ ಮಗೂ,ನಿನ್ನ ಗುರಿಯನ್ನು ನೀನು ಮುಟ್ಟಿದೆ ಆದರೆ ನೋಡು ಮೊಳೆಯಿಂದ ಆ ಮರಕ್ಕೆ ತಾಗಿದ ಏಟುಗಳು ಮಾತ್ರ ಹೋಗಲಿಲ್ಲ. ಕೋಪದಿಂದಾಗುವ ಅನಾಹುತವೂ ಹಾಗೇ ಶಾಶ್ವತವಾಗಿ ಉಳಿದು ಬಿಡುತ್ತದೆ". ತಂದೆಯ ಮಾತಿನ ಅರ್ಥ ಮಗನಿಗರಿವಾಯಿತು.


 


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಕನಕಾಪುರ ನಾರಾಯಣ

ಕನ್ನಡ ಕಲಿಸುವುದು, ಕನ್ನಡ ಸಂಘಟನೆ, ಸಮಾಜ ಸೇವೆ ಮುಂದಾಳತ್ವ, ಕಥೆ, ಲೇಖನ ಬರಹಗಳು, ಸಂಘ ಸಂಸ್ಥೆ ಕಾರ್ಯಕ್ರಮ ನಿರ್ವಹಣೆ ಇವೇ ಮುಂತಾದ ಕೆಲಸ  ಬಿಡುವಿನಲ್ಲಿ ತೊಡಗಿಸಿಕೊಂಡಿದ್ದು. ಸಂಸಾರದಲ್ಲಿ ಸತಿಯ ಪ್ರೀತಿ ಮತ್ತು ಎರಡು ಮಕ್ಕಳ ತಂದೆತನದ ಜವಾಬ್ದಾರಿ.

ನೂರಾರು ಸಣ್ಣಕಥೆಗಳನ್ನು ಈ ವೆಬ್ಸೈಟ್ ನಲ್ಲಿ ಬರೆದಿರುವುದಲ್ಲದೇ, ಸ್ವಂತ ಅನುಭವ ಅಭಿಪ್ರಾಯ ವ್ಯಕ್ತಪಡಿಸಲು http://chakkemoggu.wordpress.com/ ಎಂಬ ಬ್ಲಾಗ್ ನಲ್ಲೂ ಇವರ ಲೇಖನ ಕಾಣಹುದು.ಸಿಡ್ನಿಯಲ್ಲಿ ಸುಗಮ ಗಾನ ಸಮಾಜ, ಹೊರನಾಡ ಚಿಲುಮೆ ಕನ್ನಡದ ಮೊದಲ ಇ ಮಾಸಪತ್ರಿಕೆ,ಮೂರು ಕನ್ನಡ ವಾರಾಂತ್ಯದ ಶಾಲೆಗಳ ಆರಂಭಕ್ಕೂ ಕಾರಣರಾದವರಲ್ಲಿ ಮುಖ್ಯಸ್ಥರು.

 


ಶ್ರೀ. ಕನಕಾಪುರ ನಾರಾಯಣ ಅವರಿಂದ ಮತ್ತಷ್ಟು ಲೇಖನಗಳು


pictureವಿಚಿತ್ರ ಲೋಕ
pictureದೂರದೃಷ್ಟಿ
pictureಬೆಕ್ಕು ಬಾವುಲಿ
pictureಧರ್ಮ
pictureಗಡ್ಡ
pictureಗಾಂಪರ ಗುರು(ಹಾಸ್ಯ)
pictureಮದರ್ಸ್ ಡೇ
pictureಸುಂದರಾಂಗ !
pictureಹಗಲು - ಕನಸು (ಹಾಸ್ಯ)
pictureಮೆಟ್ಟಿಲು:(ಹಾಸ್ಯ)

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2023