ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಕಗ್ಗ ( ಇ )

ಇರುವ ಕೆಲಸವ ಮಾಡು ಕಿರಿದೆನದೆ ಮನವಿಟ್ಟು ।

ದೊರೆತುದ ಹಸಾದವೆಂದುಣ್ಣು ಗೊಣಗಿಡದೆ ।।

ಧರಿಸು ಲೋಕದ ಭರವ ಪರಮಾರ್ಥವನು ಬಿಡದೆ ।

ಹೊರಡು ಕರೆ ಬರಲಳದೆ ಮಂಕುತಿಮ್ಮ ।।

 

ಇಳೆಯಿಂದ ಮೊಳಕೆಯೊಗೆವಂದು ತಮಟೆಗಳಿಲ್ಲ ।

ಫಲ ಮಾಗುವಂದು ತುತ್ತೂರಿ ದನಿಯಿಲ್ಲ ।।

ಬೆಳಕೀವ ಸೂರ್ಯಚಂದ್ರರದೊಂದು ಸದ್ದಿಲ್ಲ ।

ಹೊಲಿ ನಿನ್ನ ತುಟಿಗಳನು ಮಂಕುತಿಮ್ಮ ।।

 

ಇಲ್ಲಿ ಚೆನ್ನಲ್ಲಿ ಚೆನ್ನೆಲ್ಲೊ ಚೆನ್ನೆನುತೆಣಿಸಿ ।

ಹುಲ್ಲುಬಯಲೊಂದೆಡೆಯಿನೊಂದಕ್ಕೆ ನೆಗೆದು ।।

ಮೆಲ್ಲದೆಯೆ ಧಾವಿಸುತ ದಣಿವ ಕರುವನು ಪೋಲ್ತೊ ।

ಡೆಲ್ಲಿಯೊ ಸುಖ ನಿನಗೆ ಮಂಕುತಿಮ್ಮ ।।

 

ಇಂಗಿತಜ್ಞಾನವಿಲ್ಲದ ಬಂಧು ಪರಿವಾರ ।

ಹಂಗಿಸುವ ಛಲವುಳ್ಳ ಸತಿಪುತ್ರಸಖರು ।।

ಬಂಗಾರದಸಿ ಚುಚ್ಚೆ ಸಿಂಗರದ ಬೊಟ್ಟೆನುವ ।

ಮಂಗಬುದ್ಧಿಯ ಜನರು ಮಂಕುತಿಮ್ಮ ।।

 

ಇಂದು ಮದುವೆಯ ಹಬ್ಬ ನಾಳೆ ವೈಕುಂಠ ತಿಥಿ ।

ಇಂದು ಮೃಷ್ಟಾನ್ನ ಸುಖ ನಾಳೆ ಭಿಕ್ಷಾನ್ನ ।।

ಇಂದು ಬರಿಯುಪವಾಸ ನಾಳೆ ಪಾರಣೆಯಿಂತು ।

ಸಂದಿರುವುದನ್ನಋಣ ಮಂಕುತಿಮ್ಮ ।।


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಸುಗಮ ಕನ್ನಡ


ಶ್ರೀ. ಸುಗಮ ಕನ್ನಡ ಅವರಿಂದ ಮತ್ತಷ್ಟು ಲೇಖನಗಳು


pictureಬೀ.ಚಿ ಚಟಾಕೆಗಳು
pictureಗಂಡು-ಹೆಣ್ಣು
pictureಕುಡುಕರು
pictureಕೋರ್ಟ್-ಲಾಯರ್ರು
pictureಅಪ್ಪ-ಮಗ
pictureಭಿಕ್ಷುಕ ಬವಣೆ
pictureಹುಚ್ಚರ ಸಂತೆ
pictureಮೇಷ್ಟ್ರು-ಮಕ್ಳು
pictureಕಚೇರಿ ಜೋಕ್ಸ್
pictureಚರ್ಚಿಲ್

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2022