ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಕಗ್ಗ ( ಗ )

ಗಗನನೀಲಿಮೆಯೆನ್ನ ಕಣ್ಗೆ ಸೊಗವೀವಂತೆ ।

ಮುಗಿವ ತರಣಿಯ ರಕ್ತ ಹಿತವೆನಿಸದೇಕೊ ।।

ಸೊಗದ ಮೂಲವದೆಲ್ಲಿ ನೀಲದೊಳೊ ಕೆಂಪಿನೊಳೊ ।

ಬಗೆವೆನ್ನ ಮನಸಿನೊಳೊ ಮಂಕುತಿಮ್ಮ ।।

 

ಗಗನ ಬಿಸಿಗವಸಾಗಿ ಕೆರೆಗಳಾವಿಗೆಯಾಗಿ ।

ಜಗದುಸಿರೆ ಹೊಗೆಯಾಗಿ ಧಗಧಗಿಸುವಂದು ।।

ಒಗೆದೆತ್ತಣಿನೊ ರಾತ್ರಿಯಲಿ ಧರೆಗೆ ತಂಪೆರೆವ ।

ಮುಗಿಲವೊಳು ದೈವಕೃಪೆ ಮಂಕುತಿಮ್ಮ ।।

 

ಗಾರೆಗಚ್ಚೇನಲ್ಲ ದಾರು ದೂಲಗಳಲ್ಲ ।

ಪಾರದ ದ್ರವದವೊಲು ಮನುಜಸ್ವಭಾವ ।।

ವೀರಶಪಥಗಳಿಂದೆ ಘನರೂಪಿಯಾಗದದು ।

ಸೈರಿಸದನಿನಿತು ಮಂಕುತಿಮ್ಮ ।।

 

ಗಿರಿಯ ಮೇಲಕೆ ದೊಡ್ಡ ಬಂಡೆಯನು ಸಿಸಿಫಸನು ।

ಉರುಳಿಸಿರಲೊಂದೆರಡು ಮಾರು ಘಾಸಿಯಲಿ ।।

ಸರಿದು ಕೆಳಕದದೆಂತೊ ಜಾರುವುದು ಮರಮರಳಿ ।

ಪುರುಷಪ್ರಗತಿಯಂತು ಮಂಕುತಿಮ್ಮ ।।

 

ಗಿಡದಿ ನಗುತಿರುವ ಹೂ ಪ್ರಕೃತಿಸಖನಿಗೆ ಚೆಂದ ।

ಮಡದಿ ಮುಡಿದಿರುವ ಹೂ ಯುವಕಂಗೆ ಚೆಂದ ।।

ಗುಡಿಯೊಳಗೆ ಕೊಡುವ ಹೂ ದೆೃವಭಕ್ತಗೆ ಚೆಂದ ।

ಬಿಡಿಗಾಸು ಹೂವಳಗೆ ಮಂಕುತಿಮ್ಮ ।।


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಸುಗಮ ಕನ್ನಡ


ಶ್ರೀ. ಸುಗಮ ಕನ್ನಡ ಅವರಿಂದ ಮತ್ತಷ್ಟು ಲೇಖನಗಳು


pictureಬೀ.ಚಿ ಚಟಾಕೆಗಳು
pictureಗಂಡು-ಹೆಣ್ಣು
pictureಕುಡುಕರು
pictureಕೋರ್ಟ್-ಲಾಯರ್ರು
pictureಅಪ್ಪ-ಮಗ
pictureಭಿಕ್ಷುಕ ಬವಣೆ
pictureಹುಚ್ಚರ ಸಂತೆ
pictureಮೇಷ್ಟ್ರು-ಮಕ್ಳು
pictureಕಚೇರಿ ಜೋಕ್ಸ್
pictureಚರ್ಚಿಲ್

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2022