ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಕಗ್ಗ ( ಜ )

ಜಟ್ಟಿ ಕಾಳಗದಿ ಗೆಲ್ಲದೊಡೆ ಗರಡಿಯ ಸಾಮು ।

ಪಟ್ಟುವರಸೆಗಳೆಲ್ಲ ವಿಫಲವೆನ್ನುವೆಯೇಂ ।।

ಮುಟ್ಟಿನೋಡವನ ಮೈಕಟ್ಟು ಕಬ್ಬಿಣ ಗಟ್ಟಿ ।

ಗಟ್ಟಿತನ ಗರಡಿ ಫಲ ಮಂಕುತಿಮ್ಮ ।।

 

ಜಗವೆನ್ನ ಮುದ್ದಿಸದದೇಕೆಂದು ಕೊರಗದಿರು ।

ಮಗುವು ಪೆತ್ತರ್ಗೆ ನೀಂ ಲೋಕಕೆ ಸ್ಪರ್ಧಿ ।।

ಹೆಗಲಹೊರೆ ಹುಟ್ಟಿದರ್ಗೆಲ್ಲಮಿರುತಿರೆ ನಿನ್ನ ।

ರಗಳೆಗಾರಿಗೆ ಬಿಡುವೊ ಮಂಕುತಿಮ್ಮ ।।

 

ಜಾನಪದ ಶಿಷ್ಟಿಯಲಿ ಸಂಪತ್ಸಮಷ್ಟಿಯಲಿ ।

ಜ್ಞಾನ ಸಂಧಾನದಲಿ ಮೌಲ್ಯ ಗಣನೆಯಲಿ ।।

ಮಾನವತೆ ಮಾನುಷ್ಯ ಧಾರ್ಮಿಕತೆಯೆದ್ದುನಿಲೆ ।

ಆನಂದ ಧರೆಗಂದು ಮಂಕುತಿಮ್ಮ ।।

 

ಜೀವನವದೊಂದು ಕಲೆ ಕಲೆಯ ಕಲಿಸುವುದೆಂತು ।

ಸಾವಿರದ ನಿಯಮ ಯುಕ್ತಿಗಳನೊರೆದೊಡೆಯುಂ ।।

ಆವುದೋ ಕುಶಲತೆಯದೊಂದಿರದೆ ಜಯವಿರದು ।

ಆ ವಿವರ ನಿನ್ನೊಳಗೆ ಮಂಕುತಿಮ್ಮ ।।


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಸುಗಮ ಕನ್ನಡ


ಶ್ರೀ. ಸುಗಮ ಕನ್ನಡ ಅವರಿಂದ ಮತ್ತಷ್ಟು ಲೇಖನಗಳು


pictureಬೀ.ಚಿ ಚಟಾಕೆಗಳು
pictureಗಂಡು-ಹೆಣ್ಣು
pictureಕುಡುಕರು
pictureಕೋರ್ಟ್-ಲಾಯರ್ರು
pictureಅಪ್ಪ-ಮಗ
pictureಭಿಕ್ಷುಕ ಬವಣೆ
pictureಹುಚ್ಚರ ಸಂತೆ
pictureಮೇಷ್ಟ್ರು-ಮಕ್ಳು
pictureಕಚೇರಿ ಜೋಕ್ಸ್
pictureಚರ್ಚಿಲ್

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2022