ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಕಗ್ಗ ( ತ )

ತರಚುಗಾಯವ ಕೆರೆದು ಹುಣ್ಣನಾಗಿಪುದು ಕಪಿ ।

ಕೊರತೆಯೊಂದನು ನೀನು ನೆನೆನೆನೆದು ಕೆರಳಿ ।।

ಧರೆಯೆಲ್ಲವನು ಶಪಿಸಿ ಮನದಿ ನರಕವ ನಿಲಿಸಿ ।

ನರಳುವುದು ಬದುಕೇನೊ ಮಂಕುತಿಮ್ಮ ।।

 

ತಂದೆ ಮಕ್ಕಳಿಗೆ ಹದಗೆಟ್ಟುದನು ಕಾಣೆಯಾ ।

ಹೊಂದಿರವರವರಹಂತೆಯು ಮೊಳೆಯುವನಕ ।।

ತಂದೆಯಾರ್ ಮಕ್ಕಳಾರ್ ನಾನೆಂಬುದೆದ್ದುನಿಲೆ ।

ಬಂಧ ಮುರಿವುದು ಬಳಿಕ ಮಂಕುತಿಮ್ಮ ।।

 

ತಲೆಪಾಗಿನೊಳಕೊಳಕ ಪಂಚೆನಿರಯೊಳಹರಕ ।

ತಿಳಿಸುವೆಯ ರಜಕಗಲ್ಲದೆ ಲೋಗರಿಂಗೆ ।।

ಅಳಲುದುಗುಡಗಳ ನಿನ್ನೊಳಗೆ ಬಯ್ತಿಡದೆ ನೀ ।

ನಿಳೆಗೆ ಹರಡುವುದೇಕೊ ಮಂಕುತಿಮ್ಮ ।।

 

ತನ್ನ ಶಕ್ತಿಯನಳೆದು ತನ್ನ ಗುಣಗಳ ಬಗೆದು ।

ಸನ್ನಿವೇಶದ ಸೂಕ್ಷ್ಮವನರಿತು ಧೃತಿದಳೆದು ।।

ತನ್ನ ಕರ್ತವ್ಯಪರಿಧಿಯ ಮೀರದುಜ್ಜುಗಿಸೆ ।

ಪುಣ್ಯಶಾಲಿಯ ಪಾಡು ಮಂಕುತಿಮ್ಮ ।।

 

ತಿರುತಿರುಗಿ ತೊಳಲುವುದು ತಿರಿದನ್ನವುಣ್ಣುವುದು ।

ಮೆರೆದು ಮೈಮರೆಯುವುದು ಹಲ್ಲ ಕಿರಿಯುವುದು ।।

ಮರಳಿ ಕೊರಗಾಡುವುದು ಕೆರಳುವುದು ನರಳುವುದು ।

ಇರವಿದೇನೊಣರಗಳೆ ಮಂಕುತಿಮ್ಮ ।।


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಸುಗಮ ಕನ್ನಡ


ಶ್ರೀ. ಸುಗಮ ಕನ್ನಡ ಅವರಿಂದ ಮತ್ತಷ್ಟು ಲೇಖನಗಳು


pictureಬೀ.ಚಿ ಚಟಾಕೆಗಳು
pictureಗಂಡು-ಹೆಣ್ಣು
pictureಕುಡುಕರು
pictureಕೋರ್ಟ್-ಲಾಯರ್ರು
pictureಅಪ್ಪ-ಮಗ
pictureಭಿಕ್ಷುಕ ಬವಣೆ
pictureಹುಚ್ಚರ ಸಂತೆ
pictureಮೇಷ್ಟ್ರು-ಮಕ್ಳು
pictureಕಚೇರಿ ಜೋಕ್ಸ್
pictureಚರ್ಚಿಲ್

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2022