ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಕಗ್ಗ ( ದ )

ದಿವಸದಿಂ ದಿವಸಕ್ಕೆ ನಿಮಿಷದಿಂ ನಿಮಿಷಕ್ಕೆ ।

ಭವಿಷಿಯವ ಚಿಂತಿಸದೆ ಬದುಕ ನೂಕುತಿರು ।।

ವಿವರಗಳ ಜೋಡಿಸುವ ಯಜಮಾನ ಬೇರಿಹನು ।

ಸವೆಸು ನೀಂ ಜನುಮವನು ಮಂಕುತಿಮ್ಮ ।।

 

ದ್ವೈತವೇನದ್ವೈತವೇನಾತ್ಮದರ್ಶನಿಗೆ ।

ಶ್ರೌತಾದಿವಿಧಿಯೇನು ತಪನಿಯಮವೇನು ।।

ನೀತಿ ಸರ್ವಾತ್ಮಮತಿಯನದರಿನಮಿತ ಪ್ರೀತಿ ।

ಭೀತಿಯಿಲ್ಲದನವನು ಮಂಕುತಿಮ್ಮ ।।

 

ದೇವರದಿದೆಲ್ಲ ದೇವರಿಗೆಲ್ಲವೆಂದೊರಲು- ।

ತಾವುದನುಮವನ ನಿರ್ಣಯಕೆ ಬಿಡದೆಯೆ ತಾಂ ।।

ದಾವನ್ತಪಡುತ ತನ್ನಿಚ್ಛೆಯನೆ ಘೋಷಿಸುವ ।

ಭಾವವೆಂತಹ ಭಕುತಿ ಮಂಕುತಿಮ್ಮ ।।

 

ಧರ್ಮಸಂಕಟದಿ ಮನ ತಲ್ಲಣಿಸುತಿರುವಂದು ।

ನಿರ್ಮಥಿಸು ನಿನ್ನಾತ್ಮವನೆ ಮಮತೆ ಬಿಟ್ಟು ।।

ನಿರ್ಮಮದ ಸದ್ವಿವೇಕದ ದೀಪಕಿಂತ ನೀಂ ।

ನೆಮ್ಮಲಿನ್ನೇನಿಹುದೊ ಮಂಕುತಿಮ್ಮ ।।

 


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಸುಗಮ ಕನ್ನಡ


ಶ್ರೀ. ಸುಗಮ ಕನ್ನಡ ಅವರಿಂದ ಮತ್ತಷ್ಟು ಲೇಖನಗಳು


pictureಬೀ.ಚಿ ಚಟಾಕೆಗಳು
pictureಗಂಡು-ಹೆಣ್ಣು
pictureಕುಡುಕರು
pictureಕೋರ್ಟ್-ಲಾಯರ್ರು
pictureಅಪ್ಪ-ಮಗ
pictureಭಿಕ್ಷುಕ ಬವಣೆ
pictureಹುಚ್ಚರ ಸಂತೆ
pictureಮೇಷ್ಟ್ರು-ಮಕ್ಳು
pictureಕಚೇರಿ ಜೋಕ್ಸ್
pictureಚರ್ಚಿಲ್

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2022