ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ದಾಸರಪದ (ಡ)

ಡಂಗುರವ ಸಾರಿ ಹರಿಯ

 

ಡಂಗುರವ ಸಾರಿ ಹರಿಯ ಡಿಂಗರಿಗರೆಲ್ಲರು  ಭೂ

ಮಂಡಲಕ್ಕೆ ಪಾಂಡುರಂಗ ವಿಠಲ ವರದೈವವೆಂದು         ಪ

 

ಹರಿಯು ಮುಡಿದ ಹೂವು ಹರಿವಾಣದೊಳಗಿಟ್ಟುಕೊಂಡು

ಹರುಷದಿಂದ ಹಾಡಿ ಪಾಡಿ ಕುಣಿದು ಚಪ್ಪಾಳಿಕ್ಕುತ           ೧

 

ಒಡಲ ಜಾಗಟೆಯ ಮಾಡಿ ನುಡಿವ ನಾಲಿಗೆಯ ಪಿಡಿದು 

ಢಂ ಢಂ ಢಣಾ ಢಣಾರೆಂದು ಹೊಡೆದು ಚಪ್ಪಾಳಿಕ್ಕುತ       ೨

 

ಇಂತು ಜಗಕ್ಕೆಲ್ಲ ಲಕ್ಷ್ಮೀಕಾಂತನಲ್ಲದಿಲ್ಲವೆಂದು 

ಸಂತತ ಶ್ರೀ ಪುರಂದರ ವಿಠಲ ಪರದೈವವೆಂದು             ೩


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಸುಗಮ ಕನ್ನಡ


ಶ್ರೀ. ಸುಗಮ ಕನ್ನಡ ಅವರಿಂದ ಮತ್ತಷ್ಟು ಲೇಖನಗಳು


pictureಬೀ.ಚಿ ಚಟಾಕೆಗಳು
pictureಗಂಡು-ಹೆಣ್ಣು
pictureಕುಡುಕರು
pictureಕೋರ್ಟ್-ಲಾಯರ್ರು
pictureಅಪ್ಪ-ಮಗ
pictureಭಿಕ್ಷುಕ ಬವಣೆ
pictureಹುಚ್ಚರ ಸಂತೆ
pictureಮೇಷ್ಟ್ರು-ಮಕ್ಳು
pictureಕಚೇರಿ ಜೋಕ್ಸ್
pictureಚರ್ಚಿಲ್

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2023